23.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ಕೊಡಗು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಮೂಡಬಿದರೆ, ಕಾರ್ಕಳ, ಧರ್ಮಸ್ಥಳ ಸುತ್ತಮುತ್ತ ಸಹ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡದ ಭಾಗಗಳಲ್ಲಿ ಸಹ ಒಂದೆರಡು ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಈ ವಾತಾವರಣವು ಮೇ 24ರ ವರೆಗೆ ಮುಂದುವರಿಯಲಿದ್ದು, ಆಮೇಲೆ ದಿನದ ಹೆಚ್ಚಿನ ಅವಧಿ ಬಿಸಿಲಿರುವ ಸಾಧ್ಯತೆ ಇದೆ.ಮುಂಗಾರು : ರಾಜ್ಯದಲ್ಲಿ ಈಗಾಗಲೇ ಮುಂಗಾರು ವಾತಾವರಣ ಇದ್ದು ಮೇ 27ರಿಂದ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಆರಂಭದ 10, 12 ದಿನಗಳವರೆಗೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…