Advertisement
ವೆದರ್ ಮಿರರ್

Weather Mirror | 25.05.2024 | ರಾಜ್ಯದ ಕೆಲವು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ

Share

26.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಸುತ್ತಮುತ್ತ ಭಾಗಗಳಲ್ಲಿ ಪುತ್ತೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಮೇ 30ರ ತನಕ ಅವಕಾಶವಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೇ 30ರ ತನಕ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಚಾಮರಾಜನಗರ ಒಂದೆರಡು ಕಡೆ, ರಾಮನಗರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು. ಕರಾವಳಿ, ಮಲೆನಾಡು ಹೊರತುಪಡಿಸಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಈಗಿನಂತೆ ಮೇ 26ರಂದು ಸಂಜೆ ರೇಮಲ್ ಚಂಡಮಾರುತವು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಭಾರತದ ಈಶಾನ್ಯ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಠಿಸುವ ಲಕ್ಷಣಗಳಿವೆ. ರಾಜ್ಯಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

15 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago