14.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಮಧ್ಯಾಹ್ನ ಮೇಲೆ ಸಾಧ್ಯತೆ ಇದೆ). ಉತ್ತರ ಕನ್ನಡ ಮೋಡಹಾಗೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ(ದಕ್ಷಿಣ), ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ದುರ್ಬಲ ಮುಂಗಾರು ಮುಂದುವರಿಲಿದ್ದು ದಿನದಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. ನಾಳೆಯಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.