ವೆದರ್‌ ಮಿರರ್‌ | 15 : 06 : 2022 | ಸಾಧಾರಣೆ ಮಳೆ ಸಾಧ್ಯತೆ | ಕೇರಳದಲ್ಲಿ ಮುಂಗಾರು ದೂರ | ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕು |

June 15, 2022
10:40 AM

16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 18ರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಕೇರಳಕ್ಕೆ ಮುಂಗಾರು ಕೈ ಕೊಡುವ ಲಕ್ಷಣಗಳಿವೆ. ಮುಂಗಾರು ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ.

ಈಗ ಇರುವುದು ಒಳನಾಡಿನ ಮಳೆ ಹೇಗೆ? ಮುಂಗಾರು ದುರ್ಬಲಗೊಂಡಿದ್ದರಿಂದ ಮೋಡಗಳು ಪಶ್ಚಿಮ ಘಟ್ಟ ದಾಟಿ ಹೋಗಲು ಅಶಕ್ತವಾಗಿವೆ. ಈ ಕಾರಣದಿಂದ ಒಳನಾಡು ಪ್ರದೇಶಗಳಲ್ಲಿ ವಾತಾವರಣ ಉಷ್ಣಾಂಶ ಏರತೊಡಗಿದೆ. ಯಥಾಪ್ರಕಾರ ಸ್ಥಳೀಯವಾಗಿ ಮೋಡಗಳು ಉತ್ಪತ್ತಿಗೊಂಡು ಮಳೆಯಾಗುತ್ತಿದೆ. ಸ್ವಲ್ಪ ಅಂದರೆ ಸುಮಾರು 10% ಮುಂಗಾರು ಪ್ರಭಾವ ಸಹ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror