27.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು, ಕಲಬುರ್ಗಿ ಹಾಗೂ ಬೀದರ್ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಮುಂಗಾರು : ಗುಜರಾತ್ ಕರಾವಳಿ ಸಮೀಪ ತಲುಪಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ನಾಳೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಜೂನ್ 28ರಿಂದ ಕರ್ನಾಟಕ ಮಲೆನಾಡು ಸೇರಿದಂತೆ ದೇಶದ ಪಶ್ಚಿಮ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೃಷಿಕ, ಹವಾಮಾನ ಆಸಕ್ತ
Be the first to comment on "ವೆದರ್ ಮಿರರ್ | 26.06.2022 | ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ"