14.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ, ಕಾರ್ಕಳ, ಕೊಡಗು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.ಇದೆಲ್ಲಾ ಪ್ರದೇಶದಲ್ಲಿ ಸದ್ಯ ಆರೆಂಜ್ ಎಲರ್ಟ್ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
(ಕಲಬುರ್ಗಿ, ಬೀದರ್ ಭಾರಿ ಮಳೆಯ ಸಾಧ್ಯತೆ ಇದೆ)
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಒಡಿಶಾದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿದ್ದು, ನಂತರದ ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 15ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…