ವೆದರ್‌ ಮಿರರ್‌ | 22 – 07 – 2022 | ಜುಲೈ 26 ವರೆಗೆ ಕರಾವಳಿ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆ |

July 22, 2022
11:22 AM

23.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸ್ವಲ್ಪ ಹೆಚ್ಚಿರಬಹುದು. ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಬಳ್ಳಾರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಂಡಿದ್ದರೂ ಜುಲೈ 26ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ. ಆಮೇಲೆ ಮೋಡ ವಾತಾವರಣ ಇರಲಿದ್ದು, ಮಧ್ಯಾಹ್ನ ಮೇಲೆ ಅಥವಾ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ನಾಳೆಯಿಂದ ಅಂದರೆ ಜುಲೈ 23ರಿಂದ 26ರ ತನಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆ ತುಂಬಾ ಕಡಿಮೆ ಇರಲಿದ್ದು 27ರಿಂದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror