28.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಮಳೆ ಹೆಚ್ಚಿರಬಹುದು.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಾಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಸುಮಾತ್ರ ತೀರದ ಸಮೀಪ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ತುಂಬಾ ದುರ್ಬಲಗೊಂಡಿದೆ. ಈಗಿನ ಪ್ರಕಾರ ಜುಲೈ ಕೊನೆಯ ತನಕವೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

