ವೆದರ್‌ ಮಿರರ್‌ | 29.07.2022 | ರಾಜ್ಯದೆಲ್ಲೆಡೆ ಗುಡುಗು ಸಹಿತ ಮಳೆ ಸಾಧ್ಯತೆ

July 29, 2022
11:18 AM
30.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ತುಮಕೂರಿನ ಒಂದೆರಡು ಕಡೆ, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಲ್ಲಿ ಇವತ್ತು ಉಂಟಾಗಿರುವ ಸಣ್ಣ ಪ್ರಮಾಣದ ವಾಯುನಿಮ್ನತೆಯಿಂದಾಗಿ ಹಿಂಗಾರು ರೀತಿಯ ಮಳೆಗೆ ಮತ್ತಷ್ಟು ಬಲ ಬಂದಂತಾಗಿದೆ.
ದಕ್ಷಿಣ ಸುಮಾತ್ರ ತೀರದ ಸಮೀಪ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದೆ. ಈಗಿನ ಪ್ರಕಾರ ಆಗಷ್ಟ್ 3ರಂದು ಶ್ರೀಲಂಕಾ ನೇರಕ್ಕೆ (ನಕ್ಷೆಯಲ್ಲಿ ತೋರಿಸಿದಂತೆ) ತಲಪುವ ಸಾಧ್ಯತೆ ಇದೆ. ಹೀಗಾದಲ್ಲಿ ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ. ಆಗಷ್ಟ್ 3ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯೂ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror