ವೆದರ್‌ ಮಿರರ್‌ | 30.07.2022 | ಇಂದೂ ರಾಜ್ಯದೆಲ್ಲೆಡೆ ಮಳೆ ಸಾಧ್ಯತೆ

July 30, 2022
11:41 AM
31.07.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಕೋಲಾರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಟ್ಟಿನಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಸುಮಾತ್ರ ಸಮೀಪದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಆ. 3ನೇ ತಾರೀಕಿನಂದು ಹಿಂದೂಮಹಾಸಾಗರದಲ್ಲಿ ಶ್ರೀಲಂಕಾ ನೇರಕ್ಕೆ ಬರುವ ಸಾಧ್ಯತೆ ಇದೆ. ಇದರಿಂದ ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಈಗಿನಂತೆ ಜು. 31ರಿಂದ ಆ. 6ನೇ ತಾರೀಕಿನವರೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಆಮೇಲೆ ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಕರಾವಳಿ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror