ವೆದರ್‌ ಮಿರರ್‌ | 08.08.2022 | ಇಂದು ರಾಜ್ಯದಾದ್ಯಂತ ಮಳೆ ಸೂಚನೆ | ಆ. 12ರ ನಂತರ ಮಳೆ ಕಡಿಮೆಯಾಗುವ ಸಾಧ್ಯತೆ

August 8, 2022
11:15 AM
09.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಒಡಿಶಾ ಕರಾವಳಿ ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದ್ದು ಭೂಮಿ ಮೇಲೆ ಮಧ್ಯಪ್ರದೇಶ ತನಕ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ.  ಇದೇ ಸಮಯದಲ್ಲಿ ಗುಜರಾತ್ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಲಿದ್ದು, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂಬೈ ಭಾರಿ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.
ಇದರ ಪರಿಣಾಮದಿಂದ ಆ.12ರ ನಂತರ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror