11.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಮತ್ತು ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿ ರಭಸಕ್ಕೆ ಮೋಡಗಳು ಮಲೆನಾಡು ಭಾಗಕ್ಕೆ ಚಲಿಸುತ್ತಿದೆ. ಮಲೆನಾಡು ಭಾಗಗಳಲ್ಲಿ ಜಾಸ್ತಿಯೇ ಮಳೆಯಾಗುತ್ತಿದೆ.
ಆದರೂ ಕರಾವಳಿ ಭಾಗಗಳಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಆಗಷ್ಟ್ 13ರ ನಂತರ ರಾಜ್ಯದಾದ್ಯಂತ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು 17ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಆ. 13ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತದ ಲಕ್ಷಣಗಳಿವೆ.