ವೆದರ್‌ ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ | ವಾಯುಭಾರ ಕುಸಿತದ ಲಕ್ಷಣ ಇದೆ |

August 11, 2022
10:47 AM

12.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಗುಜರಾತ್ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶದಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಆದರೆ ಇಲ್ಲಿ ಗಾಳಿಯು ಮಹತ್ವದ ಪಾತ್ರ ವಹಿಸುತ್ತಿದೆ. ಬೆಳಿಗ್ಗಿನ ಹೊತ್ತು ಗಾಳಿ ಕಡಿಮೆ ಇರುವುದರಿಂದ ಅಲ್ಲಲ್ಲಿ ಮಳೆ ಬೀಳುತ್ತಿದ್ದು ಆಮೇಲೆ ಬೀಸುವ ಗಾಳಿಯಿಂದ ಮೋಡಗಳು ಮುಂದೆ ಚಲಿಸಿ ಮಲೆನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ.ಈ ಕಾರಣದಿಂದ ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಇದೆ ಸಹ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಆಗಷ್ಟ್ 13 ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಪರಿಣಾಮಗಳು ಇನ್ನಷ್ಟೇ ತಿಳಿಯಬೇಕಾಗಿದೆ. ಆಗಷ್ಟ್ 15ರ ನಂತರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror