ವೆದರ್‌ ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ | ವಾಯುಭಾರ ಕುಸಿತದ ಲಕ್ಷಣ ಇದೆ |

Advertisement

12.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಗುಜರಾತ್ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶದಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಆದರೆ ಇಲ್ಲಿ ಗಾಳಿಯು ಮಹತ್ವದ ಪಾತ್ರ ವಹಿಸುತ್ತಿದೆ. ಬೆಳಿಗ್ಗಿನ ಹೊತ್ತು ಗಾಳಿ ಕಡಿಮೆ ಇರುವುದರಿಂದ ಅಲ್ಲಲ್ಲಿ ಮಳೆ ಬೀಳುತ್ತಿದ್ದು ಆಮೇಲೆ ಬೀಸುವ ಗಾಳಿಯಿಂದ ಮೋಡಗಳು ಮುಂದೆ ಚಲಿಸಿ ಮಲೆನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ.ಈ ಕಾರಣದಿಂದ ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಇದೆ ಸಹ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement

ಆಗಷ್ಟ್ 13 ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಪರಿಣಾಮಗಳು ಇನ್ನಷ್ಟೇ ತಿಳಿಯಬೇಕಾಗಿದೆ. ಆಗಷ್ಟ್ 15ರ ನಂತರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ವೆದರ್‌ ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ | ವಾಯುಭಾರ ಕುಸಿತದ ಲಕ್ಷಣ ಇದೆ |"

Leave a comment

Your email address will not be published.


*