12.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಗುಜರಾತ್ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶದಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಆದರೆ ಇಲ್ಲಿ ಗಾಳಿಯು ಮಹತ್ವದ ಪಾತ್ರ ವಹಿಸುತ್ತಿದೆ. ಬೆಳಿಗ್ಗಿನ ಹೊತ್ತು ಗಾಳಿ ಕಡಿಮೆ ಇರುವುದರಿಂದ ಅಲ್ಲಲ್ಲಿ ಮಳೆ ಬೀಳುತ್ತಿದ್ದು ಆಮೇಲೆ ಬೀಸುವ ಗಾಳಿಯಿಂದ ಮೋಡಗಳು ಮುಂದೆ ಚಲಿಸಿ ಮಲೆನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ.ಈ ಕಾರಣದಿಂದ ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಇದೆ ಸಹ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಆಗಷ್ಟ್ 13 ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಪರಿಣಾಮಗಳು ಇನ್ನಷ್ಟೇ ತಿಳಿಯಬೇಕಾಗಿದೆ. ಆಗಷ್ಟ್ 15ರ ನಂತರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…