#ವೆದರ್‌ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ವಾತಾವರಣ | ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ |

August 12, 2022
10:48 AM

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಆಗಾಗ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣದ ಮುನ್ಸೂಚನೆ ಇದೆ. ಆಗಸ್ಟ್ 13‌ ರ ನಂತರ ಅಡಿಕೆ ತೋಟಗಳಿಗೆ ಇಡೀ ದಿನ ಔಷಧ ಸಿಂಪರಣೆಗೆ ಅವಕಾಶ ಸಿಗಬಹುದು. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಒಂದೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ರಭಸ ಕಡಿಮೆಯಾದರೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಈಗಿನ ಪ್ರಕಾರ ಆಗಸ್ಟ್  17‌ ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಗುಜರಾತ್ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಪಶ್ಚಿಮ-ಉತ್ತರಕ್ಕೆ ಚಲಿಸಿ ಪಾಕಿಸ್ತಾನಕ್ಕೆ ಅಪ್ಪಳುವ ಲಕ್ಷಣಗಳಿವೆ.‌ ಆಗಸ್ಟ್ 13‌ ರಂದು ಬಂಗಾಳ ಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪರಿಣಾಮ ತಿಳಿಯಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror