13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಆಗಾಗ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣದ ಮುನ್ಸೂಚನೆ ಇದೆ. ಆಗಸ್ಟ್ 13 ರ ನಂತರ ಅಡಿಕೆ ತೋಟಗಳಿಗೆ ಇಡೀ ದಿನ ಔಷಧ ಸಿಂಪರಣೆಗೆ ಅವಕಾಶ ಸಿಗಬಹುದು. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಒಂದೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ.
ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ರಭಸ ಕಡಿಮೆಯಾದರೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಈಗಿನ ಪ್ರಕಾರ ಆಗಸ್ಟ್ 17 ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗುಜರಾತ್ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಪಶ್ಚಿಮ-ಉತ್ತರಕ್ಕೆ ಚಲಿಸಿ ಪಾಕಿಸ್ತಾನಕ್ಕೆ ಅಪ್ಪಳುವ ಲಕ್ಷಣಗಳಿವೆ. ಆಗಸ್ಟ್ 13 ರಂದು ಬಂಗಾಳ ಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪರಿಣಾಮ ತಿಳಿಯಬೇಕಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?