19.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಹಾಸನ, ಆಗುಂಬೆ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜಸ್ಥಾನದ ವಾಯುಭಾರ ಕುಸಿತವು ಪಾಕಿಸ್ಥಾನಕ್ಕೆ ಪ್ರವೇಶಿಸುತ್ತಿದೆ. ಈ ಮಧ್ಯೆ ಬಾಂಗ್ಲಾದೇಶದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು ಪರಿಣಾಮವಾಗಿ ಆಗಷ್ಟ್ಕ 20ರಿಂದ ರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಒಂದು ವಾರದ ಕಾಲ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. ಆಗಷ್ಟ್ 25 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಲಕ್ಷಣಗಳಿವೆ.ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…