20.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಹಾಸನ, ಆಗುಂಬೆ, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಪಶ್ಚಿಮ ಬಂಗಾಳ ವಾಯುಭಾರ ಕುಸಿತವು ತೀವ್ರತೆ ಪಡೆದಿದ್ದು, ಇವತ್ತು ರಾತ್ರಿ ಪಶ್ಚಿಮ ಬಂಗಾಳದ ಮೂಲಕ ಭೂಮಿಗೆ ಪ್ರವೇಶಿಸಲಿದ್ದು ಪಶ್ಚಿಮಾಭಿಮುಖವಾಗಿ ರಾಜಸ್ಥಾನದವರೆಗೂ ಚಲಿಸಲಿದೆ. ಆಗಸ್ಟ್ 21ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆಗಸ್ಟ್ 23 ರಿಂದ ದಕ್ಷಿಣ ಕರ್ನಾಟಕ ಮತ್ತು 26 ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…