20.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಹಾಸನ, ಆಗುಂಬೆ, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಪಶ್ಚಿಮ ಬಂಗಾಳ ವಾಯುಭಾರ ಕುಸಿತವು ತೀವ್ರತೆ ಪಡೆದಿದ್ದು, ಇವತ್ತು ರಾತ್ರಿ ಪಶ್ಚಿಮ ಬಂಗಾಳದ ಮೂಲಕ ಭೂಮಿಗೆ ಪ್ರವೇಶಿಸಲಿದ್ದು ಪಶ್ಚಿಮಾಭಿಮುಖವಾಗಿ ರಾಜಸ್ಥಾನದವರೆಗೂ ಚಲಿಸಲಿದೆ. ಆಗಸ್ಟ್ 21ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆಗಸ್ಟ್ 23 ರಿಂದ ದಕ್ಷಿಣ ಕರ್ನಾಟಕ ಮತ್ತು 26 ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…