22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉತ್ತರ ಕನ್ನಡ ಸ್ವಲ್ಪ ಮಳೆ ಕಡಿಮೆ ಇದ್ದರೆ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ತುಮಕೂರು, ಚಿತ್ರದುರ್ಗ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಭಾರತದಲ್ಲಿ ಉಂಟಾಗಿರುವ 2 ವಾಯುಭಾರ ಕುಸಿತವು ಬಹಳಷ್ಟು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಮಧ್ಯ ಭಾರತದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.
ಆಗಸ್ಟ್ 22 ರಿಂದ 24 ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.
25 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಸಾಧಾರಣ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…