#ವೆದರ್‌ಮಿರರ್‌ | 25 -08 -2022 | ಸೆ.1 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆ | ಕೆಲವಡೆ ಗುಡುಗು ಸಹಿತ ಮಳೆ ಸಾಧ್ಯತೆ |

August 25, 2022
11:08 AM

26.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆ ಕಡಿಮೆಯಾಗಿ ಮೋಡದ ವಾತಾವರಣದ ಇದೆ. ಆದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ಮೇಲೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಶಾಂತವಾಗಿರುವುದರಿಂದ ಸದ್ಯಕ್ಕೆ  ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಸೆಪ್ಟೆಂಬರ್ 1ರ ವರೆಗೆ ಅಲ್ಲಲ್ಲಿ ದಿನಕ್ಕೆ ಒಂದೆರಡು ಮಳೆಯಂತೆ ಮುಂದುವರಿಯುವ ಮುನ್ಸೂಚನೆ ಇದೆ. ಆಮೇಲೆ ಮತ್ತೂ ಕಡಿಮೆಯಾಗಬಹುದು. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror