26.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆ ಕಡಿಮೆಯಾಗಿ ಮೋಡದ ವಾತಾವರಣದ ಇದೆ. ಆದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ಮೇಲೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಶಾಂತವಾಗಿರುವುದರಿಂದ ಸದ್ಯಕ್ಕೆ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಸೆಪ್ಟೆಂಬರ್ 1ರ ವರೆಗೆ ಅಲ್ಲಲ್ಲಿ ದಿನಕ್ಕೆ ಒಂದೆರಡು ಮಳೆಯಂತೆ ಮುಂದುವರಿಯುವ ಮುನ್ಸೂಚನೆ ಇದೆ. ಆಮೇಲೆ ಮತ್ತೂ ಕಡಿಮೆಯಾಗಬಹುದು. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…