03.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡವು ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ, ಸಾಗರ ಕಡೆಗೆ ಸ್ವಲ್ಪ ಹೆಚ್ಚಿರುವುದರಿಂದ ಗುಡುಗು ಸಹಿತ ಉತ್ತಮ ಮಳೆಯ ಸಾಧ್ಯತೆ ಇದೆ.
ಚಾಮರಾಜನಗರದ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೇರಳ ಕರಾವಳಿಯಲ್ಲಿ ಉಂಟಾಗಿರುವ ವಾಯುನಿಮ್ನತೆಯು ಸೆ. 5ರ ತನಕವೂ ಕರಾವಳಿ ಬಿಟ್ಟು ಚಲಿಸುವ ಲಕ್ಷಣಗಳಿಲ್ಲ.
ಸೆ. 4ರ ವರೆಗೆ ರಾಜ್ಯದಾದ್ಯಂತ ಮಳೆ ಕಡಿಮೆ ಇದ್ದರೆ, ಸೆ. 5ರಿಂದ ವಾಯುನಿಮ್ನತೆಯು ಶಿಥಿಲಗೊಂಡು, ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.