04.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಸಂಜೆ ಕೊಡಗು ಗುಡುಗು ಸಹಿತ ಸಾಮಾನ್ಯವಾಗಿದ್ದರೆ, ಆಗುಂಬೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದಲ್ಲಿ ಸುಳ್ಯ, ಪುತ್ತೂರು ಸಂಜೆ ಗುಡುಗು ಸಹಿತ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆ ಇದ್ದರೆ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಮೋಡ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಉಂಟಾಗಿರುವ ವಾಯುನಿಮ್ನತೆ ರೀತಿಯ ವಾತಾವರಣವು ಇವತ್ತು ಸಂಜೆ ಕೊನೆಗೊಳ್ಳುವ ಲಕ್ಷಣಗಳಿವೆ.
ಸೆಪ್ಟೆಂಬರ್ 4ರಿಂದ 9ರ ತನಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಚುರುಕಾಗುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 5 ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ (ಮುಂಗಾರು ರೀತಿಯ) ಸಹ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ…