07.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಆಗುಂಬೆ, ಶೃಂಗೇರಿ, ಕಾರ್ಕಳ ಸುತ್ತಮುತ್ತ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಉತ್ತಮ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಕೇರಳ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಉತ್ತರ ದಿಕ್ಕಿಗೆ ಚಲಿಸುವ ಲಕ್ಷಣಗಳಿದ್ದು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ನಾಡಿದ್ದು ಸೆ. 8ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತವು ಗೋವಾ ಹಾಗೂ ಮಹಾರಾಷ್ಟ್ರ ಕರಾವಳಿ ತಲಪುತ್ತಿದ್ದಂತೆಯೆ ಅಂದರೆ ಸೆಪ್ಟೆಂಬರ್ 9ರ ನಂತರ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ.