ವೆದರ್‌ ಮಿರರ್‌ |7-9-2022 | ಕರಾವಳಿ ಜಿಲ್ಲೆಯಾದ್ಯಂತ ಸಂಜೆ ಉತ್ತಮ ಮಳೆ ಸಾಧ್ಯತೆ |

September 7, 2022
11:18 AM

08.09.2022 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾದ್ಯಂತ ಮಧ್ಯಾಹ್ನ ಮೇಲೆ ಭಾರಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು ಸಹ ಭಾರಿ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರಿನ ಆಗುಂಬೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಉತ್ತಮ ಮಳೆಯಾದರೆ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಯಾದಗಿರಿ, ಕಲಬುರ್ಗಿ, ರಾಯಚೂರು ಹಾಗೂ ಬಳ್ಳಾರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತವು ಇನ್ನಷ್ಟು ಬಲಗೊಂಡು ಈಗಿನ ಪ್ರಕಾರ ಸೆಪ್ಟೆಂಬರ್ 9 ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನಷ್ಟು ಉತ್ತರಕ್ಕೆ ಚಲಿಸಿ ಸೆಪ್ಟೆಂಬರ್ 11 ರಂದು ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈಗಿನ ಪ್ರಕಾರ ಸೆಪ್ಟೆಂಬರ್ 9 ರ ನಂತರ ಕರಾವಳಿ ಹೊರತುಪಡಿಸಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror