08.09.2022 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾದ್ಯಂತ ಮಧ್ಯಾಹ್ನ ಮೇಲೆ ಭಾರಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು ಸಹ ಭಾರಿ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರಿನ ಆಗುಂಬೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಉತ್ತಮ ಮಳೆಯಾದರೆ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಯಾದಗಿರಿ, ಕಲಬುರ್ಗಿ, ರಾಯಚೂರು ಹಾಗೂ ಬಳ್ಳಾರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತವು ಇನ್ನಷ್ಟು ಬಲಗೊಂಡು ಈಗಿನ ಪ್ರಕಾರ ಸೆಪ್ಟೆಂಬರ್ 9 ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನಷ್ಟು ಉತ್ತರಕ್ಕೆ ಚಲಿಸಿ ಸೆಪ್ಟೆಂಬರ್ 11 ರಂದು ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈಗಿನ ಪ್ರಕಾರ ಸೆಪ್ಟೆಂಬರ್ 9 ರ ನಂತರ ಕರಾವಳಿ ಹೊರತುಪಡಿಸಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…