Advertisement
ಸುದ್ದಿಗಳು

ವೆದರ್‌ ಮಿರರ್‌ | 8-9-2022 | ರಾಜ್ಯದ ವಿವಿದೆಡೆ ಮುಂದುವರಿದ ಮಳೆ | ಸೆ. 17 ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Share

09.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಪಡುಬಿದ್ರಿ, ಕಾರ್ಕಳ, ಕುದುರೆಮುಖ, ಶಿೃಂಗೇರಿ, ಹೊರನಾಡು, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಉತ್ತರ ಕನ್ನಡ ಕರಾವಳಿ ತೀರದ ಸಮೀಪ ಇರುವುದರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ನಿರಂತರ ಮಳೆ ಸಾಧ್ಯತೆ ಇದೆ.

ಕೊಡಗು ಸಾಮಾನ್ಯವಾಗಿದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಗದಗ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ರಾಯಚೂರು, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಾಮರಾಜನಗರದ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಿನ ಈ ಮಳೆಯು ಸೆ. 9 ರ ನಂತರ ಕಡಿಮೆಯಾಗಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಸೆ. 11ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸೆ. 17ರ ತನಕವೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

15 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

15 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago