09.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಪಡುಬಿದ್ರಿ, ಕಾರ್ಕಳ, ಕುದುರೆಮುಖ, ಶಿೃಂಗೇರಿ, ಹೊರನಾಡು, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಉತ್ತರ ಕನ್ನಡ ಕರಾವಳಿ ತೀರದ ಸಮೀಪ ಇರುವುದರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ನಿರಂತರ ಮಳೆ ಸಾಧ್ಯತೆ ಇದೆ.
ಕೊಡಗು ಸಾಮಾನ್ಯವಾಗಿದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಗದಗ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ರಾಯಚೂರು, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಾಮರಾಜನಗರದ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಿನ ಈ ಮಳೆಯು ಸೆ. 9 ರ ನಂತರ ಕಡಿಮೆಯಾಗಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಸೆ. 11ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸೆ. 17ರ ತನಕವೂ ಮಳೆಯ ಮುನ್ಸೂಚನೆ ಇದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…