10.09.2022 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ, ಭಟ್ಕಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರದ ಒಂದೆರಡು ಕಡೆ, ಬೆಂಗಳೂರು ಪೂರ್ವ ಭಾಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಬಳ್ಳಾರಿ, ಗದಗ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಈ ವಾತಾವರಣವು ದಕ್ಷಿಣ ಒಳನಾಡು ಭಾಗಗಳಲ್ಲಿ ಇವತ್ತು ಕೊನೆಗೊಳ್ಳುವ ಲಕ್ಷಣಗಳಿದ್ದು, ನಾಳೆಯಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸೆ. 11ರಿಂದ ಮಳೆ ಕಡಿಮೆಯಾಗುವ ಸೂಚನೆ ಇದೆ.
ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯು ಸೆ. 18ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ. ಮಲೆನಾಡು ಭಾಗಗಳಲ್ಲಿ ಕರಾವಳಿಯ ಮಳೆಯ ಪ್ರಭಾವದಿಂದ 18ರವರೆಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…