15.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಬಳ್ಳಾಪುರ, ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ ಸೆ. 16ರಂದು ಮಳೆ ತುಂಬಾ ಕಡಿಮೆ ಇರಲಿದ್ದು ಆಮೇಲಿನ ದಿನಗಳಲ್ಲಿ ಅಲ್ಲಲ್ಲಿ ದಿನಾ ಒಂದೆರಡು ಮಳೆಯ ಬೀಳುವ ಸಾಧ್ಯತೆ ಇದೆ.
ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದರೆ, ಗುಜರಾತ್ ನಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ಉಂಟಾಗಿದೆ. ಇದರಿಂದ ಮೋಡಗಳು ಉತ್ತರಕ್ಕೆ ಸೆಳೆಯುತ್ತಿವೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…