ವೆದರ್‌ ಮಿರರ್‌ | 18.09.2022 | ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭ | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ |

September 18, 2022
12:49 PM
19.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಇನ್ನೂ ಒಂದೆರಡು ದಿನ ಮೋಡ ವಾತಾವರಣ ಇರಬಹುದು.
ಕರಾವಳಿ ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡದ ವಾತಾವರಣ ಜೊತೆಗೆ ಒಂದೆರಡು ತುಂತುರು ಮಳೆ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror