24.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದೆಹಲಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ತಲುಪಿದ್ದು ಹರಿಯಾಣ, ದೆಹಲಿ, ಜೈಪುರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಒತ್ತಡ ಕಡಿಮೆಯಾದುದರಿಂದ ಸದ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ನಿರೀಕ್ಷೆಗಳಿಲ್ಲ.ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ತನಕ ಮಳೆ ವ್ಯಾಪಿಸುವ ಸಾಧ್ಯತೆ ಇದೆ. ಮತ್ತೆರಡು ದಿನಗಳಲ್ಲಿ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಹವಾಮಾನವೂ ಇದಕ್ಕೆ…
ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷಾರಂಭದಿಂದ ನವೆಂಬರ್ವರೆಗೆ 1585 ಕ್ಷಯರೋಗಿಗಳನ್ನು ಪತ್ತೆ ಮಾಡಲಾಗಿದ್ದು, ಅಗತ್ಯ…
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳ ನಡೆಯುತ್ತಿದೆ. ರೈತರು ಹಾಗೂ ಗ್ರಾಹಕರ ನಡುವೆ ಸಂಪರ್ಕ…
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಜ. 4 ಮತ್ತು 5 ರಂದು…
ಡಿಜಿಟಲ್ ಗೀಳು ಮಕ್ಕಳ ಬುದ್ಧಿಯನ್ನು ಹಾಳು ಮಾಡುವ ಒಂದು ಕಾಯಿಲೆ. ಮನೆಯಲ್ಲಿ ಕಲಿತು…
ಕೃಷಿ ಸಂಕಷ್ಟದಲ್ಲಿದೆ. ಬೆಳೆ ನಷ್ಟ ಹೆಚ್ಚಾಗುತ್ತಿದೆ. ಒಂದೋ ವಿಪರೀತ ಮಳೆ ಅಥವಾ ಬರಗಾಲ.…