27.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉತ್ತರದಿಂದ ದಕ್ಷಿಣ ಪೂರ್ವ ಭಾಗಕ್ಕೆ ಗಾಳಿಯ ಬೀಸುವಿಕೆಯಿಂದ ( ಗಾಳಿಯ ಒತ್ತಡ) ಮತ್ತು ಒಡಿಶಾ ಕರಾವಳಿ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು. ರಾತ್ರಿಯ ವೇಳೆ ಅಲ್ಲಿಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಹಾಸನ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…