ವೆದರ್‌ ಮಿರರ್‌ | 27-09-2022 | ಕರಾವಳಿ ಜಿಲ್ಲೆಗಳಾದ್ಯಂತ ಸಂಜೆಯ ವೇಳೆ ಮಳೆ ಸಾಧ್ಯತೆ | ರಾಜ್ಯದ ಕೆಲವು ಕಡೆ ಮಳೆ ಮುನ್ಸೂಚನೆ |

September 27, 2022
10:37 AM

28.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಸಹ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಗಾಳಿಯ ಒತ್ತಡ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಸೆಪ್ಟೆಂಬರ್ 30 ರ ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror