28.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಸಹ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಗಾಳಿಯ ಒತ್ತಡ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಸೆಪ್ಟೆಂಬರ್ 30 ರ ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಮ್ಯಾನ್ಮಾರ್ ಪ್ರಜೆಯೊಬ್ಬ ಸೇರಿದಂತೆ ನಾಲ್ವರನ್ನು…
ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…
ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…
ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…