ವೆದರ್‌ ಮಿರರ್‌ | 28 -09-2022 | ಕೆಲವೆಡೆ ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

September 28, 2022
2:06 PM

29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ವೇಳೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬಿಸಿಲು ಹಾಗೂ ಮೋಡದ ವಾತಾವರಣ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಕರ್ನಾಟಕದ ಭಾಗಗಳಲ್ಲಿ ಸೆಪ್ಟೆಂಬರ್ 30ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆ ಇದ್ದರೆ ಅಕ್ಟೊಬರ್ 2 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror