06.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಬಹಳ ಸೀಮಿತ ಒಂದೆರಡು ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದ್ದು ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ಅ.6 ಅಥವಾ 7 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಕರ್ನಾಟಕದ ಉತ್ತರ ಭಾಗಗಳಲ್ಲಿ ಉತ್ತಮ ಮಳೆಯ ಲಕ್ಷಣಗಳಿವೆ. ಕ್ರಮೇಣ ಅ. 9 ರಿಂದ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…