ವೆದರ್‌ ಮಿರರ್‌ | 07 -10 -2022 | ರಾಜ್ಯದ ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ | ಕರಾವಳಿ ಭಾಗದ ಅಲ್ಲಲ್ಲಿ ಮಳೆ ನಿರೀಕ್ಷೆ |

October 7, 2022
11:17 AM

08.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ಬಾಗಲಕೋಟೆ, ಬಳ್ಳಾರಿ ರಾಯಚೂರು, ಚಿತ್ರದುರ್ಗ( ಒಂದೆರಡು ಕಡೆ), ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗನ ವಾಯುಭಾರ ಕುಸಿತ ಮಹಾರಾಷ್ಟ್ರ ತಲುಪಿದ್ದು, ನಾಳೆ ಗುಜರಾತ್ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪದ ಸಮೀಪ ವಾಯುನಿಮ್ನತೆ ಉಂಟಾಗುವ ಲಕ್ಷಣಗಳಿವೆ.
ವಾಯುಭಾರ ಕುಸಿತವಾಗಿ ಪರಿವರ್ತನೆಯಾದರೆ ಮತ್ತೆ ಅ.9 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror