09.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಇದ್ದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಮೂಡಿಗೆರೆ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪರಿಣಾಮ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು ಕಲಬುರ್ಗಿ, ಬೀದರ್, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂಥಹ ತಿರುಗುವಿಕೆಯಿಂದ (ಮೇಲ್ಮೈ ಸುಳಿಗಾಳಿ)
ಅಕ್ಟೊಬರ್ 10 ರಿಂದ ಮೂರು ದಿನಗಳ ಕಾಲ ರಾಜ್ಯದ ಮಲೆನಾಡು ಹಾಗೂ ಒಳನಾಡು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.