13.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು ಮಳೆಯ ಮುನ್ಸೂಚನೆ ಇರುವುದಿಲ್ಲ. ಉತ್ತರ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಈ ಹಿಂಗಾರು ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಯಾವುದೇ ರೀತಿಯ ವಾಯುಭಾರ ಕುಸಿತಗಳಿಲ್ಲ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…