14.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಪೂರ್ವ ಮತ್ತು ಪಶ್ಚಿಮದ ಮೋಡಗಳು ಸಂದಿಸುವುದರಿಂದ ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಚಾರ್ಮಾಡಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಗದಗ, ಬಳ್ಳಾರಿ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಅಕ್ಟೊಬರ್ 16 ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆದರೂ 20ರಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಇವತ್ತಿನಿಂದ 3 ದಿನಗಳ ಕಾಲ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…