ವೆದರ್‌ ಮಿರರ್‌ | 14.10.2022 | ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆ ಸಾಧ್ಯತೆ | ಅ.20 ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ |

October 14, 2022
1:38 PM

15.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಪ್ರದೇಶದಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ – ಶಿವಮೊಗ್ಗ – ಚಿಕ್ಕಮಗಳೂರು ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ. ಉತ್ತರ ಕನ್ನಡ – ಬೆಳಗಾವಿ – ಧಾರವಾಡ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ವಿಜಯಪುರ, ಕೊಪ್ಪಳ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಬೆಳಗಾವಿ, ಬಾಗಲಕೋಟೆ, ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಪಾವಗಡ, ಹಾಸನ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯಿಂದ ಅಂತಹ ಪರಿಣಾಮ ಇಲ್ಲದಿದ್ದರೂ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಬಹುದು. ಈಗಿನ ಪ್ರಕಾರ ಕರಾವಳಿಯಲ್ಲಿ ಅ.19ರ ತನಕ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆ ಸಾಧ್ಯತೆ ಇದೆ.

ಅ. 20ರಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅ. 17ರಿಂದ ಮಳೆ ಕಡಿಮೆಯಾದರೆ ಅ.20ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಜೋರಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?
March 20, 2026
12:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror