ವೆದರ್‌ ಮಿರರ್‌ | 15.10.2022 | ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಸಾಧ್ಯತೆ

Advertisement
Advertisement

16.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆ, ದಕ್ಷಿಣ ಕನ್ನಡ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಉತ್ತಮ ಮಳೆಯಾದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement

ಕೊಡಗು, ಚಿಕ್ಕಮಗಳೂರಿನ ಶೃಂಗೇರಿ, ತೀರ್ಥಹಳ್ಳಿ, ಆಗುಂಬೆ, ಕುದುರೆಮುಖ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗ, ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ತುಮಕೂರು, ಉಳಿದ ಚಿಕ್ಕಮಗಳೂರು, ದಾವಣಗೆರೆ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement

ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ರೀತಿಯ ವಾತಾವರಣವು ಉಂಟಾಗಿದ್ದರೂ ಸಮತೋಲನಗೊಂಡು ಅಷ್ಟೇನು ಪರಿಣಾಮ ಬೀರುವ ಲಕ್ಷಣಗಳಿಲ್ಲ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ವೆದರ್‌ ಮಿರರ್‌ | 15.10.2022 | ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಸಾಧ್ಯತೆ"

Leave a comment

Your email address will not be published.


*