17.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಂಜೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದ ಭಾಗಗಳಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.ಉಡುಪಿಯ ಕಾರ್ಕಳ ಸುತ್ತಮುತ್ತ ಹಾಗೂ ಗಡಿ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ಬಳ್ಳಾರಿ, ಗದಗ, ರಾಯಚೂರು, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಹಾವೇರಿ, ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದಾದ್ಯಂತ ಒಕ್ಟೊಬರ್ 17 ಮತ್ತು 18ರಂದು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದು 19 ಮತ್ತು 20ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಬಿರುಸಾಗಿರುವ ಸಾಧ್ಯತೆ ಇದೆ.
ರಾಜ್ಯದ ಉತ್ತರ ಕರಾವಳಿ ಹಾಗೂ ಒಳನಾಡಿನಾದ್ಯಂತ ಒಕ್ಟೊಬರ್ 22ರಿಂದ ಮಳೆ ತುಂಬಾ ಕಡಿಮೆಯಾಗಿ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಅಕ್ಟೊಬರ್ 24 ರಿಂದ ದಕ್ಷಿಣ ಕರಾವಳಿಯಲ್ಲಿ ಸಹ ಮಳೆ ಕಡಿಮೆಯಾಗುವ ಮುನ್ಸೂಚನೆ ಇದೆ.
ಈಗನ ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ಪಶ್ಚಿಮಕ್ಕೆ ಚಲಿಸುತ್ತಿರುವುದರಿಂದ ಯಾವುದೇ ಪರಿಣಾಮಗಳಿಲ್ಲ. ಆದರೆ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಳ್ಳಬಹುದು.
ಈ ಮಧ್ಯೆ ವಾಯುಭಾರ ಕುಸಿತಗಳುಂಟಾದರೆ ಬದಲಾಗಬಹುದು.
ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…
ಮಂಗಳೂರಿನಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ…
ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ…
ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ…
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…