Advertisement
ವೆದರ್ ಮಿರರ್

ವೆದರ್‌ ಮಿರರ್‌ | 17.10.2022 | ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ | ಸುಬ್ರಹ್ಮಣ್ಯ, ಧರ್ಮಸ್ಥಳ ಪ್ರದೇಶದಲ್ಲಿ ಮಳೆ ಸಾಧ್ಯತೆ

Share
18.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಗುಡುಗು ಸಹಿತ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.
ಉಡುಪಿಯ ಕಾರ್ಕಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಹಾಗೂ ಉತ್ತರ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಭಾರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ದಾವಣಗೆರೆ, ಹಾವೇರಿ, ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು,  ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಗದಗ, ಬಾಗಲಕೋಟೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಂತ ತಿರುವಿಕೆ ಮತ್ತಷ್ಟು ಪಶ್ಚಿಮಕ್ಕೆ ಚಲಿಸಿದ್ದು, ಇದರಿಂದ ರಾಜ್ಯಕ್ಕೆ ಯಾವುದೇ ಪರಿಣಾಮವಿಲ್ಲ.
ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಪ್ರಭಲಗೊಳ್ಳುವ ಮುನ್ಸೂಚನೆ ಇದೆ. ಈ ವಾಯುಭಾರ ಕುಸಿತವು ಪ್ರಭಲಗೊಂಡಂತೆ ಹಿಂಗಾರು ಮಾರುತಗಳು ದುರ್ಬಲಗೊಳ್ಳಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

18 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

19 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

21 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago