20.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು ಉತ್ತರ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ದಕ್ಷಿಣ, ದಾವಣಗೆರೆ, ಬಳ್ಳಾರಿ, ರಾಯಚೂರು, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು ದಕ್ಷಿಣ, ಚಿಕ್ಕಬಳ್ಳಾಪುರ, ತುಮಕೂರು ಉತ್ತರ, ಧಾರವಾಡ, ಬೆಳಗಾವಿ, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿಯ ವಾಯುಭಾರ ಕುಸಿತವು ಇನ್ನೂ ಆರಂಭಿಕ ಹಂತದಲ್ಲಿದ್ದು, ಬಲಗೊಂಡರೆ ಮಾತ್ರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಈಗಿನ ಪರಿಸ್ಥಿತಿಯಂತೆ ವಾಯುಭಾರ ಕುಸಿತವು ಒಕ್ಟೊಬರ್ 21ರ ನಂತರ ಬಲಗೊಳ್ಳುವ ಲಕ್ಷಣಗಳಿವೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…