22.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಹಾಗೂ ಉತ್ತರ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಕೋಲಾರ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿಯಲಿದ್ದು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಲಗೊಳ್ಳುತ್ತಿದ್ದು, ಇನ್ನು ಮೂರು ದಿನಗಳಲ್ಲಿ ಉತ್ತರಕ್ಕೆ ಪಯಣಿಸಲು ಆರಂಭಿಸಿ ಒಡಿಶಾದ ಕರಾವಳಿಯ ಮೂಲಕ ಚಲಿಸಿ ಒಕ್ಟೊಬರ್ 25 ಅಥವಾ 26ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ವಾಯುಭಾರ ಕುಸಿತವು ಚಂಡಮಾರುತವಾಗುವ ಲಕ್ಷಣಗಳಿವೆ ಹಾಗೂ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ರಾಜ್ಯದಾದ್ಯಂತ ಹಿಂಗಾರು ಹಿಂದೆ ಸರಿದು ಒಣ ಹವೆ ಪ್ರವೇಶಿಸಲಿದೆ.