29.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತಂತಹ ತಿರುವಿಕೆ ಆರಂಭವಾಗಿರುವುದರಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಂಡಿದೆ. ಈಗನ ಈ ವಾತಾವರಣವು ಒಂದು ವಾರದ ಕಾಲ ಮುಂದುವರಿಯುವ ಲಕ್ಷಣಗಳಿವೆ.
ಅಕ್ಟೊಬರ್ 30 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನವೆಂಬರ್ 3 ಅಥವಾ 4 ರ ನಂತರ ಮಳೆಯ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…